close
Choose your channels

‘ದಿಲ್ರಂಗೀಲಾ ಚಿತ್ರಕ್ಕೆ ಸ್ಪೆಷಲ್ ಎಫ

Friday, January 3, 2014 • Kannada Comments
Listen to article
--:-- / --:--
1x
This is a beta feature and we would love to hear your feedback?
Send us your feedback to audioarticles@vaarta.com

ಕೆ.ಮಂಜು ಸಿನಿಮಾಸ್ ಲಾಂಛನದಲ್ಲಿ ಕೆ.ಮಂಜು ಅವರು ನಿರ್ಮಿಸುತ್ತಿರುವ ‘ದಿಲ್ರಂಗೀಲಾ ಚಿತ್ರಕ್ಕೆ ಮಂಜರಿ ಸ್ಟುಡಿಯೋದಲ್ಲಿ ಸ್ಪೆಷಲ್ ಎಫ಼ೆಕ್ಟ್ ಅಳವಡಿಸಲಾಗುತ್ತಿದೆ. ಸದ್ಯದಲ್ಲೆ ಚಿತ್ರದ ಪ್ರಥಮಪ್ರತಿ ಸಿದ್ದವಾಗಲಿದೆ.

ಗೋಲ್ಡನ್ಸ್ಟಾರ್ ಗಣೇಶ್ ನಾಯಕರಾಗಿ ನಟಿಸುತ್ತಿರುವ ಈ ಚಿತ್ರವನ್ನು ಪ್ರೀತಂಗುಬ್ಬಿ ನಿರ್ದೇಶಿಸುತ್ತಿದ್ದಾರೆ. ರಚಿತರಾಂ, ಪ್ರಿಯಾಂಕರಾವ್, ದತ್ತಣ್ಣ, ರಂಗಾಯಣರಘು, ಅಚ್ಯುತಕುಮಾರ್, ಯಮುನ, ಶ್ರೀನಿಧಿ, ಗಿರಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ನಿರ್ದೇಶಕರೇ ಕಥೆ, ಚಿತ್ರಕಥೆ ಬರೆದಿರುವ ಈ ಚಿತ್ರಕ್ಕೆ ಎಚ್.ಸಿ.ವೇಣು ಅವರ ಛಾಯಾಗ್ರಹಣವಿದೆ. ಅರ್ಜುನ್ಜನ್ಯ ಸಂಗೀತ ನಿರ್ದೇಶನ, ದೀಪು.ಎಸ್.ಕುಮಾರ್ ಸಂಕಲನ, ಮುರಳಿ ನೃತ್ಯ ನಿರ್ದೇಶನ ಹಾಗೂ ಯೋಗಿ ಸಹನಿರ್ದೇಶನವಿರುವ ‘ದಿಲ್ರಂಗೀಲಾ ಚಿತ್ರಕ್ಕೆ ಪ್ರಶಾಂತ್ ಸಂಭಾಷಣೆ ಬರೆದಿದ್ದಾರೆ. ಯೋಗರಾಜ್ಭಟ್, ಜಯಂತಕಾಯ್ಕಿಣಿ, ಅರ್ಜುನ್ ಗೀತರಚನೆ ಮಾಡಿದ್ದಾರೆ.

Follow us on Google News and stay updated with the latest!