close
Choose your channels

‘ಪುಂಗಿ ದಾಸ’ ಮಾರ್ಚ್ ಬಿಡುಗಡೆ

Wednesday, February 19, 2014 • Kannada Comments
Listen to article
--:-- / --:--
1x
This is a beta feature and we would love to hear your feedback?
Send us your feedback to audioarticles@vaarta.com

ಬೀದರ್ ಕೋಟೆಯಲ್ಲಿ ಹಾಡಿನ ಚಿತ್ರೀಕರಣದೊಂದಿಗೆ ‘ಪುಂಗಿದಾಸ’ ಚಿತ್ರದ ಸಂಪೂರ್ಣ ಚಿತ್ರೀಕರಣ ಮುಗಿದಿದೆ. ಎರಡು ದಿವಸಗಳ ಹಾಡಿನ ನಂತರ ಚಿತ್ರ ತಂಡ ಬೆಂಗಳೂರಿಗೆ ಆಗಮಿಸಿ ಇದೆ ವಾರದಲ್ಲಿ ಧ್ವನಿ ಸುರುಳಿಯನ್ನು ಬಿಡುಗಡೆ ಮಾಡಿ ಮಾರ್ಚ್ ಮಾಸದಲ್ಲಿ ಚಿತ್ರವನ್ನೂ ರಜತ ಪರದೆಯ ಮೇಲೆ ತರಲು ಲೆಕ್ಕಾಚಾರ ಹಾಕುತ್ತಿದೆ.

‘ಪುಂಗಿ ದಾಸ’ ಈಗಾಗಲೇ ತೆಲುಗಿನಲ್ಲಿ ವಿಕ್ಟರಿ ವೆಂಕಟೇಶ್ ಅಭಿನಯಿಸಲು ಒಪ್ಪಿದಾಗಿದೆ. ಈ ಹಿಂದೆ ಇದು ತಮಿಳಿನಲ್ಲಿ ರೀಮೇಕ್ ಮಾಡಲು ಸಂತಾನಮ್ ಅವರು 30 ಲಕ್ಷ ಕೊಟ್ಟು ಖರೀದಿಸಿದ್ದಾರೆ ಎಂದು ತಿಳಿಸಲಾಗಿದೆ.

ಒಟ್ಟಿನಲ್ಲಿ ಕೋಮಲ್ ಕುಮಾರ್ ಅಭಿನಯದ ‘ಪುಂಗಿ ದಾಸ’ ಕನ್ನಡದಲ್ಲಿ ಬಿಡುಗಡೆಗೂ ಮುಂಚೆಯೇ ಪರಭಾಷೆಗಳಲ್ಲಿ ಸದ್ದು ಮಾಡುತ್ತಿದೆ.

ಕೋಮಲ್ ಕುಮಾರ್ ಅವರ ಮತ್ತೊಂದು ನಿರೀಕ್ಷಿತ ಚಿತ್ರ ‘ಪುಂಗಿ ದಾಸ’ ಚಿತ್ರದ ನಿರ್ದೇಶಕ ಶ್ರೀನಾಥ್ ‘ರಾಂಬೋ’ ನಿರ್ದೇಶಕರು, ‘ವಿಕ್ಟರಿ’ ಚಿತ್ರಕ್ಕೆ ಕಥೆ ಒದಗಿಸಿರುವವರು ಈ ಬಾರಿ ಒಂದು ವಿಚಿತ್ರ ಹಾಗೂ ಸಮಾಜದಲ್ಲಿ ಜರಗುವ ಸಂಗತಿಯನ್ನು ಇಟ್ಟುಕೊಂಡೇ ನಕ್ಕು ನಗಿಸಲು ಕೋಮಲ್ ಕುಮಾರ್ ಅವರ ಇಮೇಜ್ ಅನ್ನು ಬಳಸಿಕೊಳ್ಳುತ್ತಿದ್ದಾರೆ.

ಮನೆಯಲ್ಲಿ ತಾತ ಅಸುನೀಗಿದ್ದಾನೆ. ಆದರೆ ಆತ ಸಾಲ ಕೊಟ್ಟಿರುವ ತಾತ ಹಾಗೂ ಪಡೆದಿರುವ ಘಾಟಿ ತಾತ. ಅದನ್ನು ಪಡೆಯಲು ಹ್ಯಾಗಗೆಲ್ಲ ಪುಂಗಿ ಊದಬೇಕಾಗಬಹುದು ಎಂಬುದು ಚಿತ್ರದ ತಿರುಳು.

ಕೋಮಲ್ ಕುಮಾರ್ ಅವರಿಗೆ ಆಸ್ಮ ಎಂಬುವರು ನಾಯಕಿ. ಆರ್ ಎನ್ ಸುದರ್ಶನ್ ತಾತ, ಸೌಕರ್ ಜಾನಕಿ ಅವರು ಅಜ್ಜಿ ಪಾತ್ರದಾರಿ. ಬಿ ಸಿ ಪಾಟೀಲ್, ಆಶಿಷ್, ತಬ್ಲ ನಾಣಿ, ಕುರಿ ಪ್ರತಾಪ್, ಬುಲ್ಲೆಟ್ ಪ್ರಕಾಷ್, ಪದ್ಮಜ ರಾವು, ಮುಖ್ಯ ಪಾತ್ರದಲ್ಲಿ ರಾಜೇಂದ್ರ ಕಾರಂತ್ ಹಾಗೂ ಇನ್ನಿತರರು ಇದ್ದಾರೆ.

‘ಪುಂಗಿ ದಾಸ’ ಚಿತ್ರಕ್ಕೆ ಸಂಗೀತದ ಪುಂಗಿ ಊದುತ್ತಿರುವವರು ಫರ್ಹಾನ್ ರೋಶನ್ (ಈ ಹಿಂದೆ ಏಮಿಲ್ ಎಂದು ಪರಿಚಯ ಅದವರು ನಂದ ಲವ್ಸ್ ನಂದಿತಾ ಚಿತ್ರದ ಜಿಂಕೆಮರಿ ಹಾಡಿನ ಖ್ಯಾತಿ).

ಅರುಳ

Follow us on Google News and stay updated with the latest!