1. தமிழ்
  2. తెలుగు
  3. Hindi
  4. Tamil
  5. Telugu
  6. Malayalam
  7. Kannada

ಭಟ್ಟರ ಪರಪಂಚ

IndiaGlitz [Friday, April 04, 2014]
Comments

ಪರಮಾತ್ಮ ಅಂತ ಡ್ರಾಮಾ ಮಾಡಿದವರು ಪಂಚರಂಗಿ ಅಂದವರು ಯೋಗರಾಜ ಭಟ್ಟರು ಹೊಸದಾಗಿ ಗಾಳಿ ಪಟ ಹಾರಿಸಲು ಮುಂಗಾರು ಮಳೆ ಹೊತ್ತಿಗೆ ಬರಲು ಸಜ್ಜಾಗುತ್ತಿದ್ದಾರೆ. ಅದೇ 'ಪರಪಂಚ' ಸಿನೆಮಾದ ತಯಾರಿಕೆ ಬಗ್ಗೆ. ಯೋಗರಾಜ್ ಮೂವೀಸ್ ಹಾಗೂ ವೇದಂ ಸ್ಟುಡಿಯೋ ಜಂಟಿಯಾಗಿ ನಿರ್ಮಾಣದ ಜೊತೆಗೆಡಾ:ರವಿರಾಜ್ ಹಾಗೂ ರುದ್ರಪ್ಪ ಈ ಚಿತ್ರದ ಸಹ ನಿರ್ಮಾಪಕರು. ಭಟ್ಟರು ಮಾತ್ರ ನಿರ್ದೇಶನ ಮಾಡುತ್ತಿಲ್ಲ. ಆದರೆ ಪಾತ್ರ ಒಂದರಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಹಲವು ವರ್ಷಗಳಿಂದ ಸಾಕಷ್ಟು ಕಿರುಚಿತ್ರಗಳನ್ನು ನಿರ್ದೇಶಿಸಿರುವ ಹಾಗೂ 'ಗಾಂಧಿಸ್ಮೈಲ್' ಚಿತ್ರದ ನಿರ್ದೇಶಕರೂ ಆಗಿರುವ ಕ್ರಿಸ್ಜೋಶಿ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಈ 'ಪರಪಂಚ' ಕ್ಕೆ ವೆಜ್ ಎಂಡ್ ನಾನ್ವೆಜ್ ಎಂಬ ಅಡಿಬರಹವಿದೆ. ನಿರ್ದೇಶಕರೇ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದಾರೆ.

ಏಪ್ರಿಲ್ ಹತ್ತರಿಂದ ಚಿತ್ರೀಕರಣ ಆರಂಭವಾಗಲಿದೆ. ಬೆಂಗಳೂರು ಸುತ್ತಮುತ್ತ ಎರಡು ಹಂತಗಳಲ್ಲಿ ಚಿತ್ರೀಕರಣ ನಡೆಯಲಿದೆ. ಚಿತ್ರದಲ್ಲಿ ಐದು ಹಾಡುಗಳಿದ್ದು ನಾಲ್ಕು ಹಾಡುಗಳನ್ನು ಯೋಗರಾಜ್ಭಟ್ ಹಾಗೂ ಒಂದು ಹಾಡನ್ನು ಜಯಂತಕಾಯ್ಕಿಣಿ ಬರೆದಿದ್ದಾರೆ. ವೀರಸಮರ್ಥ್ ಸಂಗೀತ ನೀಡುತ್ತಿದ್ದಾರೆ. ಸಂತೋಷ್ ರೈ ಪಾತಾಜೆ ಛಾಯಾಗ್ರಹಣ, ಸುರೇಶ್ ಸಂಕಲನ ಹಾಗೂ ಶಶಿಧರ್ ಅಡಪರ ಕಲಾ ನಿರ್ದೇಶನ 'ಪರಪಂಚ 'ಕ್ಕಿದೆ.

ದಿಗಂತ್ ನಾಯಕರಾಗಿ ಅಭಿನಯಿಸುತ್ತಿರುವ ಈ ಚಿತ್ರದ ನಾಯಕಿ ರಾಗಿಣಿ. ಯೋಗರಾಜ್ಭಟ್, ದತ್ತಣ್ಣ, ಕೆ.ಎಸ್.ಎಲ್.ಸ್ವಾಮಿ, ಅನಂತನಾಗ್, ವಿ.ಮನೋಹರ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.Other News


ಚಂಡ ಪ್ರಚಂಡರು!

Songs on Net for Panganama

NI Waiting for Guinness

Kaikini Open Bath!

ಚಂಡ ಪ್ರಚಂಡರು!

Copyright 2016 IndiaGlitz. All rights reserved. This material may not be published, broadcast, rewritten, or redistributed.Latest Videos

Hindi | Tamil | Telugu | Malayalam | Kannada
Home | Tell a friend | Contact Us | Advertise | Terms | Privacy Policy | RSS/Content Syndication | Submit Showtimes

Copyright 2016 IndiaGlitz.com. All rights reserved.